ಬೆಂಗಳೂರು: ನರೇಂದ್ರ ಮೋದಿ ದೇಶದ ಪ್ರಧಾನಮಂತ್ರಿಯಾಗಿ ನಾಳೆಗೆ 12 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ದೇವಸ್ಥಾನಗಳಲ್ಲಿ ಬಿಜೆಪಿಯಿಂದ ನಾಳೆ ವಿಶೇಷ ಪೂಜೆ ನಡೆಯಲಿದೆ.
ರಾಜ್ಯದಲ್ಲಿ ಕೂಡಾ ನಾಳೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್, ಸಹ-ಉಸ್ತುವಾರಿ ಸುಧಾಕರ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕರಾದ ಆರ್. ಅಶೋಕ್ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ಪೂಜೆ ಸಲ್ಲಿಸಲಿದ್ದಾರೆ.
ರಾಜ್ಯಾದ್ಯಂತ ಬಿಜೆಪಿಯ ಮೂವತ್ತೊಂಬತ್ತು ಸಂಘಟನಾ ಜಿಲ್ಲೆಗಳಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿದ್ದು, ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಮಾಜಿ ಸಚಿವರಿಗೆ ಪೂಜೆಯಲ್ಲಿ ಭಾಗಿಯಾಗಲು ಸೂಚನೆ ನೀಡಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಯುಷ್ಯ ವೃದ್ಧಿಗಾಗಿ ಹಾರೈಸಿ ದೇವಸ್ಥಾನಗಳಲ್ಲಿ ಪ್ರಾರ್ಥನೆ ನಡೆಯಲಿದೆ.


