ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ನಾಳೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸಿಎಂ ಹಾಗೂ ಡಿಸಿಎಂ ಆದ ಬಳಿಕ ಮೊದಲ ಬಾರಿಗೆ ಇಬ್ಬರೂ ದೆಹಲಿಗೆ ತೆರಳುತ್ತಿದ್ದಾರೆ.
ನಾಳೆ ರಾತ್ರಿ ನವದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಐಎಎಸ್ ಅಧಿಕಾರಿಗಳ ಜೊತೆ ಸಿಎಂ ಮತ್ತು ಡಿಸಿಎಂ ಭೋಜನಕೂಟದಲ್ಲಿ ಭಾಗಿಯಾಗಲಿದ್ದು, ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ.
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ಮತ್ತು ಡಾ. ಜಿ. ಪರಮೇಶ್ವರ್ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
ಇದೇ ವೇಳೆ ರಾಜ್ಯಸಭೆ, ಪರಿಷತ್ ಚುನಾವಣೆ , ಸಚಿವರ ಖಾತೆ ಮುನಿಸು ಮತ್ತು ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ವರಿಷ್ಠರ ಜೊತೆ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸುವ ಸಾಧ್ಯತೆಯಿದೆ.
ಈ ಮಧ್ಯೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಕೂಡಾ ಸಿಎಂ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.


