Thursday, June 11, 2026
Homeಚಿಕ್ಕಮಗಳೂರುರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮಹಿಳೆ ಸಾವಿಗೆ ಶರಣು

ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮಹಿಳೆ ಸಾವಿಗೆ ಶರಣು

- Advertisement -
- Advertisement -

ಚಿಕ್ಕಮಗಳೂರು : ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮಹಿಳೆ ಸಾವಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಹಾಲೇನಹಳ್ಳಿ ಎಂಬಲ್ಲಿ ನಡೆದಿದೆ.ಸ್ಥಳೀಯ ಉದ್ಯಮಿ ರಾಜೇಶ್ ಅವರ ಪತ್ನಿ ಸುಮಾ (55) ಮೃತ ದುರ್ದೈವಿ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದ್ದು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂದಾಜಿಸಲಾಗಿದೆ.ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಡೆತ್‌ನೋಟ್‌ನಲ್ಲಿರುವ ಮಾಹಿತಿಯನ್ನು ಆಧರಿಸಿ ತನಿಖೆ ಮುಂದುವರಿದಿದೆ.

ವಿಷಯ ತಿಳಿಯುತ್ತಿದ್ದಂತೆ ಬಸವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.

ಪ್ರಕರಣ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ಹಿಂದಿನ ನಿಖರ ಕಾರಣ ಹಾಗೂ ಇತರ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!