Thursday, June 11, 2026
Homeಕರಾವಳಿಉಡುಪಿಉಡುಪಿ; ಅಮ್ಮನ ಕಂಕುಳಲ್ಲಿದ್ದ ಒಂದೂವರೆ ವರ್ಷದ ಕಂದಮ್ಮನ ತಲೆ ಮೇಲೆ ತೆಂಗಿನಕಾಯಿ ಬಿದ್ದು ಸಾವು

ಉಡುಪಿ; ಅಮ್ಮನ ಕಂಕುಳಲ್ಲಿದ್ದ ಒಂದೂವರೆ ವರ್ಷದ ಕಂದಮ್ಮನ ತಲೆ ಮೇಲೆ ತೆಂಗಿನಕಾಯಿ ಬಿದ್ದು ಸಾವು

- Advertisement -
- Advertisement -

ಉಡುಪಿ; ಅಮ್ಮನ ಕಂಕುಳಲ್ಲಿದ್ದ ಒಂದೂವರೆ ವರ್ಷದ ಕಂದಮ್ಮನ ತಲೆ ಮೇಲೆ ತೆಂಗಿನಕಾಯಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬ್ರಹ್ಮಾವರದ ಹೆರಂಜೆಯಲ್ಲಿ ಮಂಗಳವಾರ ನಡೆದಿದೆ. ಬ್ರಹ್ಮಾವರದಲ್ಲಿ ಫಾಸ್ಟ್‌ ಫುಡ್‌ ಅಂಗಡಿ ನಡೆಸುತ್ತಿರುವ ಪ್ರಶಾಂತ್‌ ಹಾಗೂ ಗೃಹಿಣಿ ಸುಚಿತ್ರಾ ಒಂದೂವರೆ ವರ್ಷದ ಕಂದಮ್ಮ ಮೃತ ದುರ್ದೈವಿ.

ಸುಚಿತ್ರಾ ಅವರು ತನ್ನ 6 ವರ್ಷದ ಹಿರಿಯ ಮಗಳನ್ನು ಶಾಲಾ ಬಸ್ ಹತ್ತಿಸಲು ಹೋಗುವಾಗ ಸುಚಿತ್ರಾ ಅವರು ಪುಟ್ಟ ಮಗುವನ್ನೂ ಕಂಕುಳಲ್ಲಿ ಎತ್ತಿಕೊಂಡು ಹೊರಟಿದ್ದರು. ತೋಟ ಹಾಗೂ ಗದ್ದೆಯ ಬದಿಯಲ್ಲಿ ಸುಮಾರು 250 ರಿಂದ 300 ಮೀಟರ್ ನಡೆಯಬೇಕಾಗಿತ್ತು. ಮನೆ ದಾಟಿ ತೋಟದ ಹಾದಿಯಲ್ಲಿ ಕೇವಲ 50 ಮೀಟರ್ ಸಾಗುವಷ್ಟರಲ್ಲಿ, ದಾರಿ ಬದಿಯಲ್ಲಿದ್ದ 40 ಅಡಿ ಎತ್ತರದ ಮರದಿಂದ ಹಸಿ ತೆಂಗಿನಕಾಯಿಯೊಂದು ಅಚಾನಕ್ಕಾಗಿ ನೇರವಾಗಿ ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದಿದೆ. ಕಾಯಿ ಬಿದ್ದ ರಭಸಕ್ಕೆ ಮಗುವಿನ ತಲೆಯಲ್ಲಿ ಒಂದು ಇಂಚಿನಷ್ಟು ಆಳವಾದ ಗಾಯವಾಗಿತ್ತು ಎನ್ನಲಾಗಿದೆ.

ದುರಂತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಪಕ್ಕದ ಮನೆಯ ವಾಹನದಲ್ಲಿ ಮಗುವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆ ತಲುಪುವವರೆಗೂ ಮಗು ಕಣ್ಣು ಬಿಟ್ಟು ನೋಡುತ್ತಿತ್ತು ಎನ್ನಲಾಗಿದೆ. ಮಣಿಪಾಲ ಆಸ್ಪತ್ರೆಯ ವೈದ್ಯರು ತಕ್ಷಣವೇ ಮಗುವಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಿದರಾದರೂ, ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಮಗು ಕೊನೆಯುಸಿರೆಳೆದಿದೆ. ಮಗುವನ್ನು ಕಳೆದುಕೊಂಡ ಹೆತ್ತವರ ಆಕಂದ್ರನ ಮುಗಿಲು ಮುಟ್ಟಿದೆ.

- Advertisement -

Latest News

error: Content is protected !!