Friday, June 12, 2026
Homeತಾಜಾ ಸುದ್ದಿವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡದಿರಲು ರಾಜ್ಯ ಸರ್ಕಾರ ನಿರ್ಧಾರ

ವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡದಿರಲು ರಾಜ್ಯ ಸರ್ಕಾರ ನಿರ್ಧಾರ

- Advertisement -
- Advertisement -

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ
ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಳ ಮಾಡದೇ ಯಥಾಸ್ಥಿತಿಯನ್ನೇ ಮುಂದುವರೆಸುವ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.

ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ. ಶರಣ ಪ್ರಕಾಶ್‌ ಪಾಟೀಲ್‌ ಅಧ್ಯಕ್ಷತೆಯಲ್ಲಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಗಳ ಜೊತೆ ಇಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಬಾರಿ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕ ಹಚ್ಚಳವಾಗುತ್ತದೆ ಎಂಬ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ನಿರಾಳರಾಗುವಂತಾಗಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್, ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಶುಲ್ಕವನ್ನು ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆಯನ್ನು ನಾವು ಒಪ್ಪಿಕೊಂಡಿಲ್ಲ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿದ್ದ ಶುಲ್ಕವು ಯಥಾಸ್ಥಿತಿಯಲ್ಲೇ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!