Saturday, August 22, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಚಂದ್ರಶೇಖರ್ ಮೊಬೈಲ್ ಸ್ವಿಚ್ ಆಫ್ ಮಾಡಿ...

ಬೆಳ್ತಂಗಡಿ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಚಂದ್ರಶೇಖರ್ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿ

- Advertisement -
- Advertisement -

ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಕಾಮುಕ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬಳಿಕ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದು. ಅದಲ್ಲದೆ ಬಂಧನದ ಭೀತಿಯಿಂದ ತನ್ನ ವಕೀಲರ ಮೂಲಕ ಜಾಮೀನು ಅರ್ಜಿ ಮಂಗಳೂರು ಕೋರ್ಟ್ ನಲ್ಲಿ ಸಲ್ಲಿಸಲಾಗಿದೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವರ್ಗಾವಣೆ ಮಾಡಿಕೊಳ್ಳದೆ ಕಳೆದ 25 ವರ್ಷಗಳಿಂದ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಬೀಡುಬಿಟ್ಟಿದ್ದ ಔಷಧಿ ವಿಭಾಗದ ಮುಖ್ಯಸ್ಥ ಹಾಗೂ ಬೆಳ್ತಂಗಡಿ ತಾಲೂಕು ಸರಕಾರಿ ನೌಕರರ ಸಂಘದ ಉಪಾಧ್ಯಕ್ಷನಾಗಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿಯಾಗಿರುವ ಚಂದ್ರಶೇಖರ್ ತನ್ನ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದು. ಈ ಬಗ್ಗೆ ಯಾರಲ್ಲದ್ದರೂ ಹೇಳಿದ್ರೆ ಕೆಲಸದಿಂದ ತೆಗೆಯುವುದಾಗಿ ಪದೆ ಪದೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜೂ‌.11 ರಂದು BNS-2023(u/s-75(3),79,351(2)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಜೂ‌.12 ರಂದು ಸಂತ್ರಸ್ತ ಮಹಿಳೆಯನ್ನು ಕರೆದುಕೊಂಡು ಬಂದು ಮಹಜರು ನಡೆಸಲಾಗಿದೆ. ಇನ್ನೊಂದಡೆ ಆಸ್ಪತ್ರೆಗೆ ಕರ್ತವ್ಯಕ್ಕೆ ಚಂದ್ರಶೇಖರ್ ಹಾಜರಾಗದೆ ಬಂಧನದ ಭೀತಿಯಿಂದ ಮಂಗಳೂರಿಗೆ ಪರಾರಿಯಾಗಿ ಅಡಗಿ ಕುಳಿತಿದ್ದಾನೆ ಎನ್ನಲಾಗಿದೆ.

ಚಂದ್ರಶೇಖರ್ ಆಸ್ಪತ್ರೆಗೆ ಜೂ.12 ರಂದು ಕರ್ತವ್ಯಕ್ಕೆ ಹಾಜರಾಗದ ಬಗ್ಗೆ ನೋಟಿಸ್ ಜಾರಿ ಮಾಡಲಾಗಿದ್ದು. ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಇಲಾಖಾ ತನಿಖೆ ಕೂಡ ನಡೆಯುತ್ತಿದ್ದು ವರದಿ ಬಂದ ಬಳಿಕ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ(DHO) ತಿಮ್ಮಯ್ಯ ಅವರು ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!