- Advertisement -
![]()
- Advertisement -
ಬೆಂಗಳೂರು: ರಾಜ್ಯಸಭಾ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಆಯ್ಕೆಯ ಪ್ರಮಾಣಪತ್ರ ಸ್ವೀಕರಿಸಿದರು.
ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣಾಧಿಕಾರಿಯಾಗಿದ್ದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಯ್ಕೆಯ ಪ್ರಮಾಣಪತ್ರ ವಿತರಿಸಿದರು.
ಬಳಿಕ ವಿಧಾನಸೌಧದಲ್ಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ಕಾಂಗ್ರೆಸ್ ಮುಖಂಡರು ಅಭಿನಂದನೆ ಸಲ್ಲಿಸಿದರು.
ಪ್ರಮಾಣಪತ್ರ ಸ್ವೀಕರಿಸಿದ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷ ಅವಕಾಶ ಕೊಟ್ಟಿದ್ದು, ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಹೇಳಿದ್ದಾರೆ.
ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಹದಿಮೂರನೇ ಬಾರಿಗೆ ಮಲ್ಲಿಕಾರ್ಜುನ ಖರ್ಗೆ ಜನಪ್ರತಿನಿಧಿಯಾಗಿ ಆಯ್ಕೆಯಾದಂತಾಗಿದೆ.
- Advertisement -


