Friday, June 12, 2026
Homeತಾಜಾ ಸುದ್ದಿಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ನಡುವೆ ರಾಜಿಗೆ ಸಂಧಾನಕಾರರ ನೇಮಕ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ನಡುವೆ ರಾಜಿಗೆ ಸಂಧಾನಕಾರರ ನೇಮಕ

- Advertisement -
- Advertisement -

ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಜಟಾಪಟಿಗೆ ಅಂತ್ಯ ಹಾಡಲು ಸುಪ್ರೀಂ ಕೋರ್ಟ್ ಮುಂದಾಗಿದೆ. ಇಬ್ಬರು ಮಹಿಳಾ ಅಧಿಕಾರಿಗಳ ನಡುವೆ ರಾಜಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನೇಮಿಸಿದೆ.

ಸಂಧಾನಕಾರರಾಗಿ ಜಸ್ಟಿಸ್ ಕುರಿಯನ್ ಜೋಸೆಫ್ ಅವರನ್ನು ಸುಪ್ರೀಂ ಕೋರ್ಟ್ ನೇಮಿಸಿದ್ದು, ಇಬ್ಬರ ನಡುವಿನ ಮಾನನಷ್ಟ ಮೊಕದ್ದಮೆ ಕೇಸ್‌ನಲ್ಲಿ ಸಂಧಾನ ನಡೆಸಲು ಸೂಚನೆ ನೀಡಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯಾಗಿರುವ ಕುರಿಯನ್ ಜೋಸೆಫ್ ಶೀಘ್ರದಲ್ಲೇ ಸಂಧಾನ ಸಭೆ ನಡೆಸುವ ಸಾಧ್ಯತೆ ಇದೆ.

ಕೋರ್ಟ್‌ನ ಹೊರಗಡೆ ಇಬ್ಬರೂ ಮಾತನಾಡಿ ವಿವಾದ ಬಗೆಹರಿಸಿಕೊಳ್ಳಿ ಎಂಬ ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ಇಬ್ಬರೂ ಅಧಿಕಾರಿಗಳು ಸಹಮತ ಸೂಚಿಸಿದ್ದಾರೆ.

- Advertisement -

Latest News

error: Content is protected !!