- Advertisement -
![]()
- Advertisement -
ಬೆಂಗಳೂರು: ವಿವಾದಿತ ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.
ಉದ್ದೇಶಿತ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸುವಂತೆ ರಾಹುಲ್ ಗಾಂಧಿಗೆ ಬಿ.ವೈ. ವಿಜಯೇಂದ್ರ ಮತ್ತು ನಿಖಿಲ್ ಕುಮಾರಸ್ವಾಮಿ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಈಗಾಗಲೇ ಜೂನ್ 11 ರಂದು ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆಯನ್ನು ಹೊರಡಿಸಿದ್ದು, ರೈತರು ಸುಮಾರ್ 470 ದಿನಗಳಿಂದ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ.
ಜೂನ್ 19 ರಂದು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಡದಿಯಲ್ಲಿ ಪಾದಯಾತ್ರೆ ಮೂಲಕ ಹೋರಾಟ ನಿಗದಿಯಾಗಿದ್ದು, ರಾಜ್ಯ ಸರ್ಕಾರ ಯೋಜನೆಯನ್ನು ಕೈಗೊಳ್ಳುವುದಾಗಿ ಹೇಳಿದೆ.
- Advertisement -


