- Advertisement -
![]()
- Advertisement -
ಉಡುಪಿ: ಮೊನ್ನೆಯಷ್ಟೇ ತಮಿಳುನಾಡು ಸಿಎಂ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ್ದರು. ಅದರ ಬೆನ್ನಲ್ಲೇ ಇಂದು (ಭಾನುವಾರ) ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದು ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು. ಇತ್ತೀಚೆಗೆ ಕೇರಳದ ಪ್ರಮುಖ ದೇವಾಲಯಗಳು ಸೇರಿದಂತೆ ದೇಶದ ಹಲವೆಡೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇದೀಗ ಕೊಲ್ಲೂರು ದೇವಿಯ ದರ್ಶನ ಪಡೆದಿದ್ದಾರೆ.
- Advertisement -


