- Advertisement -
![]()
- Advertisement -
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.ನಿನ್ನೆ ರಾತ್ರಿ ಕೊಲ್ಲೂರಿನಲ್ಲಿ ವಾಸ್ತವ್ಯ ಹೂಡಿದ್ದ ವಿಜಯೇಂದ್ರ ಇಂದು ಬೆಳಗ್ಗೆ ದೇವಿಯ ದರ್ಶನ ಪಡೆದು ಹೋಮ ಕಾರ್ಯದಲ್ಲೂ ಭಾಗಿಯಾಗಿದ್ದಾರೆ.
ನರೇಂದ್ರ ಮೋದಿ ಸರ್ಕಾರ 12 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ವಿಜಯೇಂದ್ರ ಮೂಕಾಂಬಿಕೆ ದೇವಿಗೆ ಪ್ರಾರ್ಥನೆಯನ್ನೂ ಸಲ್ಲಿಸಿದ್ದಾರೆ.ಈ ಸಂಧರ್ಭದಲ್ಲಿ ಶಾಸಕರುಗಳಾದ ವಿ. ಸುನೀಲ್ ಕುಮಾರ್, ಬೈರತಿ ಬಸವರಾಜ್, ಹರೀಶ್ ಪೂಂಜಾ ಮತ್ತು ಗುರುರಾಜ್ ಗಂಟಿಹೊಳೆ ಕೂಡಾ ಭಾಗಿಯಾಗಿದ್ದರು.ನಿನ್ನೆ ರಾತ್ರಿ ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಕೂಡಾ ಕೊಲ್ಲೂರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.
- Advertisement -


