- Advertisement -
![]()
- Advertisement -
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಪತ್ರಕರ್ತ, ಲಂಕೇಶ್ ಪತ್ರಿಕೆಯ ಸಂಸ್ಥಾಪಕ ದಿ.ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಇಂದು (ಜೂನ್ 15) ಹೃದಯಾಘಾತದಿಂದ ಕೊನೆಯುಸಿರೆಳೆದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಬೆಂಗಳೂರಿನ ಉತ್ತರ ಹಳ್ಳಿಯಲ್ಲಿರುವ ತಮ್ಮ ಪುತ್ರಿ ಕವಿತಾ ಲಂಕೇಶ್ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದಿರಾ ಲಂಕೇಶ್ ಅವರು ಪುತ್ರಿ ಕವಿತಾ ಲಂಕೇಶ್ ಮತ್ತು ಪುತ್ರ ಇಂದ್ರಜಿತ್ ಲಂಕೇಶ್ ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ.
ಇಂದಿರಾ ಲಂಕೇಶ್ ಅವರ ಅಂತ್ಯಕ್ರಿಯೆಯು ಜೂನ್ 16 ಮಂಗಳವಾರದಂದು ಬೆಳಗ್ಗೆ ಚಾಮರಾಜಪೇಟೆಯಲ್ಲಿರುವ ಸ್ಮಶಾನದಲ್ಲಿ ನೆರವೇರಲಿದೆ ಎಂದು ಪುತ್ರಿ ಕವಿತಾ ಲಂಕೇಶ್ ಮಾಹಿತಿ ನೀಡಿದ್ದಾರೆ.
- Advertisement -


