Monday, June 15, 2026
Homeಕರಾವಳಿಉಡುಪಿಉಡುಪಿ: ಚಲಿಸುತ್ತಿದ್ದಾಗಲೇ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ

ಉಡುಪಿ: ಚಲಿಸುತ್ತಿದ್ದಾಗಲೇ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ

- Advertisement -
- Advertisement -

ಉಡುಪಿ: ಚಲಿಸುತ್ತಿದ್ದಾಗಲೇ ಶಾಲಾ ಬಸ್ ಚಾಲಕನಿಗೆ ಹೃದಯಾಘಾತವಾಗಿರುವ ಘಟನೆ ಮಣಿಪಾಲದಲ್ಲಿ ಸೋಮವಾರ ನಡೆದಿದೆ.

ಮಣಿಪಾಲದ ಮಾಧವ ಕೃಪಾ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕ ಸುರೇಶ್ ಸಣ್ಣಕ್ಕಿಬೆಟ್ಟು (54) ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಪರಿಸ್ಥಿತಿಯನ್ನು ಅರಿತ ಸುರೇಶ್ ಅವರು ಬಸ್ಸಿನ ನಿಯಂತ್ರಣ ಕಳೆದುಕೊಳ್ಳುವ ಮುನ್ನವೇ ವಾಹನವನ್ನು ರಸ್ತೆ ಬದಿಗೆ ತರುವ ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ.

ಸುರೇಶ್ ಅವರ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಚಾಲಕನ ಸಮಯಪ್ರಜ್ಞೆಯಿಂದ ಮಹಾ ದುರಂತವೊಂದು ತಪ್ಪಿದ್ದು ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ.

- Advertisement -

Latest News

error: Content is protected !!