Tuesday, June 16, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕೊಕ್ಕಡದಲ್ಲಿ ಕಾಲೇಜ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಕೊಕ್ಕಡದಲ್ಲಿ ಕಾಲೇಜ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ : ವಾಣಿ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕೊಕ್ಕಡ ಗ್ರಾಮದ ಹಳ್ಳಿಂಗೇರಿಯಲ್ಲಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ.16 ರಂದು ಬೆಳಗ್ಗೆ ನಡೆದಿದೆ.

ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ಮೂಲದ ರಮೇಶ್ ಅವರ ಪುತ್ರಿ ಮೃತಪಟ್ಟ ಶ್ವೇತಾ(18) ಎಂದು ಗುರುತಿಸಲಾಗಿದೆ. ಈಕೆ ಬೆಳ್ತಂಗಡಿಯ ಹಳೆಕೋಟೆಯಲ್ಲಿರುವ ವಾಣಿ ಪಿಯು ಕಾಲೇಜಿಗೆ ಹೋಗುತ್ತಿದ್ದಳು.ಐದು ವರ್ಷಗಳಿಂದ ಶ್ವೇತಾ ಅವರ ತಂದೆ-ತಾಯಿ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ನೆಲೆಸಿದ್ದು, ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆತ್ಮಹತ್ಯೆ ಮಾಡಿಕೊಂಡ ಶ್ವೇತಾ ಎಂದಿನಂತೆ ಬೆಳಗ್ಗೆ ಎದ್ದು ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದರು. ಘಟನೆ ನಡೆದ ವೇಳೆ ತಂದೆ ಕೆಲಸದ ನಿಮಿತ್ತ ಹೊರಗೆ ತೆರಳಿದ್ದು, ತಾಯಿ ಮಾತ್ರ ಮನೆಯಲ್ಲಿ ಇದ್ದರು ಎನ್ನಲಾಗಿದೆ. ಈ ಮಧ್ಯೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ವೇತಾ ಪತ್ತೆಯಾಗಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!