Thursday, June 18, 2026
Homeಕರಾವಳಿಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಲುಷಿತ ನೀರು ಪೂರೈಕೆ: ಹಲವರಿಗೆ ಕಾಣಿಸಿಕೊಂಡ ಆರೋಗ್ಯ ಸಮಸ್ಯೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಲುಷಿತ ನೀರು ಪೂರೈಕೆ: ಹಲವರಿಗೆ ಕಾಣಿಸಿಕೊಂಡ ಆರೋಗ್ಯ ಸಮಸ್ಯೆ

- Advertisement -
- Advertisement -

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.31 ಬಿಜೈ ಬಟ್ಟಗುಡ್ಡೆ, ನ್ಯೂರೋಡ್, ಕದ್ರಿ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಕಲುಷಿತ ನೀರು ಪೂರೈಕೆಯಾಗಿ ಸ್ಥಳೀಯರಿಗೆ ಆರೋಗ್ಯ ಸಮಸ್ಯೆಯಾಗಿದೆ ಎಂದು ಆರೋಪಿಸಲಾಗಿದೆ.

ಕಲುಷಿತ ನೀರು ಪೂರೈಕೆಯ ಟ್ಯಾಂಕ್ ನಿಂದ ಪಾಲಿಕೆ ಆಧಿಕಾರಿಗಳು ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ನೀರು ಕುಡಿಯಲು ಯೋಗ್ಯವಾಗಿಲ್ಲ ಎಂಬ ವರದಿ ಬಂದಿದೆ.

ಈ ಹಿನ್ನೆಲೆಯಲ್ಲಿ ನೀರು ಪೂರೈಕೆಯ ಟ್ಯಾಂಕ್ ಸ್ವಚ್ಚಗೊಳಿಸಿ ಸರಿಪಡಿಸಲಾಗಿದೆ. ಮಳೆಗಾಲದ ಆರಂಭ ಹಾಗೂ ನಗರದ ವಿವಿಧೆಡೆ ರಸ್ತೆ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೈಪ್‌ಲೈನ್‌ಗಳಿಗೆ ತೊಂದರೆ ಉಂಟಾಗಿ ಕಲುಷಿತ ನೀರು ಪೂರೈಕೆಯಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅಭಿಪ್ರಾಯಿಸಿದ್ದಾರೆ.

ಆದರೆ, ಇದನ್ನು ಅಲ್ಲಗೆಳೆದಿರುವ ಸ್ಥಳೀಯರು ನೀರಿನ ಪೈಪ್‌ಲೈನ್‌ ಜತೆಯಲ್ಲೇ ಒಳಚರಂಡಿ ಪೈಪ್‌ಲೈನ್‌ಗಳೂ ಹಾದು ಹೋಗುತ್ತಿರುವ ಕಾರಣ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕುಡಿಯುವ ನೀರು ಕಲುಷಿತಗೊಂಡು ಜನಸಾಮಾನ್ಯರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂಬ ಆರೋಪವನ್ನು ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!