Saturday, June 20, 2026
Homeತಾಜಾ ಸುದ್ದಿಕೆಪಿಸಿಸಿ ಅಧ್ಯಕ್ಷರಾಗಿ ನಾಳೆ ಬಿ.ಕೆ. ಹರಿಪ್ರಸಾದ್ ಪದಗ್ರಹಣ

ಕೆಪಿಸಿಸಿ ಅಧ್ಯಕ್ಷರಾಗಿ ನಾಳೆ ಬಿ.ಕೆ. ಹರಿಪ್ರಸಾದ್ ಪದಗ್ರಹಣ

- Advertisement -
- Advertisement -

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ನಾಳೆ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಪದಗ್ರಹಣ ಮಾಡಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾರಂಭ ಆಯೋಜಿಸಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಒಂದು ಲಕ್ಷಕ್ಕೂ ಹೆಚ್ಚು ಜನ ಸಮಾರಂಭದಲ್ಲಿ ಭಾಗಿಯಾಗಲಿದ್ದು, 1200ಕ್ಕೂ ಹೆಚ್ಚು ಬಸ್ ಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ 70 ಫುಡ್ ಕೌಂಟರ್ ಗಳನ್ನೂ ತೆರೆಯಲಾಗಿದೆ.

ಕಾರ್ಯಕ್ರಮದ ವೇದಿಕೆಯಲ್ಲಿ 300 ಜನರಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದೆ.

- Advertisement -

Latest News

error: Content is protected !!