Saturday, June 20, 2026
Homeಕರಾವಳಿಮೈಸೂರು ದಸರಾ ಉತ್ಸವದಲ್ಲಿ ಕಂಬಳ ಆಯೋಜನೆ

ಮೈಸೂರು ದಸರಾ ಉತ್ಸವದಲ್ಲಿ ಕಂಬಳ ಆಯೋಜನೆ

- Advertisement -
- Advertisement -

ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾದಲ್ಲಿ ಕಂಬಳ ಕ್ರೀಡೆ ಆಯೋಜನೆಯಾಗಲಿದೆ. ಈ ಕುರಿತಂತೆ ಮೈಸೂರು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಂದು ಮೊದಲ ಸಭೆ ನಡೆಸಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆಯಂತೆ ದಸರಾದಲ್ಲಿ ಕಂಬಳ ಆಯೋಜನೆ ಮಾಡಲಾಗುತ್ತಿದ್ದು, ಮೈಸೂರಿನ ವಿಜಯನಗರ ಮೊದಲನೇ ಹಂತ, ವಿಜಯನಗರ ನಾಲ್ಕನೇ ಹಂತ ಮತ್ತು ಸಾತಗಳ್ಳಿ ರಿಂಗ್ ರೋಡ್ ಬಳಿ 7.5 ಎಕರೆ ಜಾಗ ಗುರುತು ಮಾಡಲಾಗಿದೆ.

ಕಂಬಳ ಕ್ರೀಡೆ ಆಯೋಜಿಸಲು ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದ್ದು, ಕಂಬಳ ಉಪ ಸಮಿತಿಗೆ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಮೈಸೂರು ಜಿಲ್ಲಾಡಳಿತದಿಂದ ಇಂದು ನಮೊದಲ ಸಭೆ ನಡೆದಿದ್ದು, ಇದೇ ಮೊದಲ ಬಾರಿಗೆ ದಸರಾ ಮಹೋತ್ಸವದಲ್ಲಿ ಕಂಬಳ ಆಕರ್ಷಣೆಯಾಗಲಿದೆ.

- Advertisement -

Latest News

error: Content is protected !!