- Advertisement -
![]()
- Advertisement -
ಬೆಳ್ತಂಗಡಿ: ಯಕ್ಷಗಾನ ಕಲಾವಿದರಿಗೆ ನಿಂದಿಸಿ, ಬೆದರಿಕೆ ಹಾಕಿದ ಪ್ರಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮರುದ್ಧದ ಕೇಸಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಪ್ರಸಂಗದಲ್ಲಿ ತಮ್ಮ ಹೋರಾಟವನ್ನು ಹಾಸ್ಯ ಮಾಡಲಾಗಿದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಕಲಾವಿದರನ್ನು ನಿಂದಿಸಿ ಬೆದರಿಕೆ ಹಾಕಿದ್ದರು ಎಂದು ಪುತ್ತೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು.
ಜೂ.22ರಂದು ಮಹೇಶ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಖಾಸಗಿ ಸಂಭಾಷಣೆ ವೈರಲ್ ಆಗಿದ್ದು ಹೇಗೆ ಎಂದು ಪ್ರಶ್ನೆ ಮಾಡಿದೆ. ಅಲ್ಲದೆ ಮಹೇಶ್ ಶೆಟ್ಟಿ ತಿಮರೋಡಿಗೆ ತನಿಖಾಧಿಕಾರಿ ಮುಂದೆ ಹಾಜರಾಗಲು ಸೂಚನೆ ನೀಡಿದೆ. ತನಿಖೆಗೆ ಸಹಕರಿಸುವಂತೆಯೂ ಹೈಕೋರ್ಟ್ ತಿಮರೋಡಿಗೆ ನಿರ್ದೇಶಿಸಿದೆ.ಜತೆಗೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ.
- Advertisement -


