- Advertisement -
![]()
- Advertisement -
ಬೆಂಗಳೂರು; ಬಿಡದಿ ಟೌನ್ಶಿಪ್ ಬೈರಮಂಗಲಕ್ಕೆ ಬನ್ನಿ ಚರ್ಚೆ ಮಾಡೋಣ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಕಿರುವ ಸವಾಲಿಗೆ ಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಸಿಎಂ ಡಿ ಕೆ ಶಿವಕುಮಾರ್ “ಬಿಡದಿ ಟೌನ್ ಶಿಪ್ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಪರವಾಗಿ ಜೆಡಿಎಸ್ ನವರು ಅಧಿವೇಶನದಲ್ಲಿ ಚರ್ಚೆ ಮಾಡಲಿ, ಉತ್ತರ ಕೊಡೋಣ” ಎಂದಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ “ನಾನು ಈಗ ಏನನ್ನೂ ಮಾತನಾಡುವುದಿಲ್ಲ. ಹಿಂದೆಯೇ ಚರ್ಚೆಗೆ ಕರೆದಿದ್ದೆ. ಅದರೆ ಬರಲಿಲ್ಲ. ಮುಂದಿನ ಅಧಿವೇಶನದಲ್ಲಿ ಅವರ ಪಕ್ಷದ, ಇತರ ಅನುಭವಿ ರಾಜಕಾರಣಿಗಳ ಮೂಲಕ ಚರ್ಚೆ ಮಾಡಿಸಲಿ” ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ದಾಖಲೆ ಬಿಡುಗಡೆ ಮಾಡಿದ್ದಾರೆ ಎಂದು ಕೇಳಿದಾಗ, “I Wish him All the Best” ಎಂದಿದ್ದಾರೆ.
- Advertisement -


