- Advertisement -
![]()
- Advertisement -
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳು ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಯ ರಾಜ್ಯ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.
ಮಧ್ಯಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದ ಕುರಿಯನ್ ಅವರ ಅಧಿಕಾರಾವಧಿಯು 2026ರ ಜೂನ್ 21ರಂದು ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಕೈಗೊಂಡಿದ್ದಾರೆ.
- Advertisement -


