ಇತ್ತೀಚಿನ ಚುನಾವಣೆಯಲ್ಲಿ ಬಿಜೆಪಿಯ ಎದುರು ಸೋಲುಂಡ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ಆಂತರಿಕ ಕಲಹ ಈಗ ಸ್ಫೋಟಗೊಂಡಿದ್ದು, ಮಮತಾ ಬ್ಯಾನರ್ಜಿ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.
ಮಮತಾ ಅವರ ಸೋದರಸಬಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಕಾರ್ಯವೈಖರಿ ವಿರುದ್ಧ ಅಸಮಾಧಾನಗೊಂಡಿದ್ದ ಬಂಡಾಯ ನಾಯಕರು, ಅವರನ್ನು ಪಕ್ಷದಿಂದ ಅಮಾನತುಗೊಳಿಸುವ ನಿರ್ಣಯಕ್ಕೆ ಸರ್ವಾನುಮತದಿಂದ ಸಹಿ ಹಾಕಿದ್ದಾರೆ. ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ನಡೆದ ಬಂಡಾಯ ಬಣದ ತರಾತುರಿಯ ವಿಶೇಷ ಸಭೆಯಲ್ಲಿ ಈ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ರುತಬ್ರತಾ ಬ್ಯಾನರ್ಜಿ ನೇತೃತ್ವದ ಶಿಬಿರವು ಮಮತಾ ಬ್ಯಾನರ್ಜಿ ಅವರ ಜಾಗಕ್ಕೆ ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಅರೂಪ್ ರಾಯ್ ಅವರನ್ನು ಟಿಎಂಸಿಯ ಹೊಸ ಅಖಿಲ ಭಾರತ ಅಧ್ಯಕ್ಷರನ್ನಾಗಿ ಘೋಷಿಸಿದೆ. ಅಲ್ಲದೆ, ಪಕ್ಷದ ಸಂಘಟನೆಯಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ಮರಳಿ ತರಲು 20 ಸದಸ್ಯರ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (NWC) ರಚಿಸಲಾಗಿದ್ದು, ಇದರಲ್ಲಿ ಹಿರಿಯ ನಾಯಕ ಫಿರ್ಹಾದ್ ಹಕೀಮ್ ಸೇರಿದಂತೆ 12 ಪ್ರಮುಖ ನಾಯಕರನ್ನು ಸೇರಿಸಿಕೊಳ್ಳಲಾಗಿದೆ.


