- Advertisement -
![]()
- Advertisement -
ಮಂಗಳೂರು: ದ.ಕ. ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ತಮ್ಮ 78ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಅವರ ದಫನ ಕಾರ್ಯವು ಜೂನ್ 24 ಬುಧವಾರದಂದು, ಮಧ್ಯಾಹ್ನ ಮೂಡುಬಿದಿರೆ ಸಮೀಪದ ಕಾಶಿಪಟ್ಣ ದಾರುನ್ನೂರು ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನೆರವೇರಲಿದೆ.
ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಜೂನ್ 23, ಮಂಗಳವಾರದಂದು ಸಂಜೆಯವರೆಗೆ ಮಂಗಳೂರು ಕೇಂದ್ರ ಜುಮಾ ಮಸೀದಿಯಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಆ ಬಳಿಕ ಮೃತದೇಹವನ್ನು ಕಾಸರಗೋಡಿನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಈ ಕುರಿತು ಮಂಗಳೂರು ಕೇಂದ್ರ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ ಅವರು ಅಧಿಕೃತ ಪ್ರಕಟನೆಯಲ್ಲಿ ಮಾಹಿತಿ ನೀಡಿದ್ದಾರೆ.
- Advertisement -


