Tuesday, June 23, 2026
Homeಕರಾವಳಿಬೆಳ್ತಂಗಡಿ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಚಂದ್ರಶೇಖರ್ ಗೆ ಜಾಮೀನು ಮಂಜೂರು

ಬೆಳ್ತಂಗಡಿ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ಚಂದ್ರಶೇಖರ್ ಗೆ ಜಾಮೀನು ಮಂಜೂರು

- Advertisement -
- Advertisement -

ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ಚಂದ್ರಶೇಖರ್ ಗೆ ಮಂಗಳೂರು ಸೆಷನ್ಸ್ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ.

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ಔಷಧಿ ವಿಭಾಗದ ಮುಖ್ಯಸ್ಥ ಹಾಗೂ ಬೆಳ್ತಂಗಡಿ ತಾಲೂಕು ಸರಕಾರಿ ನೌಕರರ ಸಂಘದ ಉಪಾಧ್ಯಕ್ಷನಾಗಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿಯಾಗಿರುವ ಚಂದ್ರಶೇಖರ್ ತನ್ನ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದು. ಈ ಬಗ್ಗೆ ಯಾರಲ್ಲದ್ದರೂ ಹೇಳಿದ್ರೆ ಕೆಲಸದಿಂದ ತೆಗೆಯುವುದಾಗಿ ಪದೆ ಪದೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜೂ‌.11 ರಂದು BNS-2023(u/s-75(3),79,351(2)) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಾದ ಬಳಿಕ ಆಸ್ಪತ್ರೆಗೆ ಚಂದ್ರಶೇಖರ್ ಕರ್ತವ್ಯಕ್ಕೆ ಹಾಜರಾಗದೆ ಬಂಧನದ ಭೀತಿಯಿಂದ ತಲೆಮರೆಸಿಕೊಂಡು ಮಂಗಳೂರು ಸೆಷನ್ಸ್ ನ್ಯಾಯಾಲಯದಲ್ಲಿ ವಕೀಲರ ಮೂಲಕ ಜೂ.12 ರಂದು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯಾಲಯ ವಿಚಾರಣೆ ನಡೆಸಿ ಜೂ.23 ರಂದು ಆರೋಪಿ ಚಂದ್ರಶೇಖರ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದೆ.

- Advertisement -

Latest News

error: Content is protected !!