Wednesday, June 24, 2026
Homeಕರಾವಳಿಮಂಗಳೂರುನಾಳೆ ಬೆಳ್ತಂಗಡಿ ವಕೀಲರ ಸಂಘದ ಗ್ರಂಥಾಲಯ ಮತ್ತು ಜನರೇಟರ್ ಉದ್ಘಾಟನೆ

ನಾಳೆ ಬೆಳ್ತಂಗಡಿ ವಕೀಲರ ಸಂಘದ ಗ್ರಂಥಾಲಯ ಮತ್ತು ಜನರೇಟರ್ ಉದ್ಘಾಟನೆ

- Advertisement -
- Advertisement -

ಬೆಳ್ತಂಗಡಿ; ವಕೀಲರ ಸಂಘದ ಸದಸ್ಯರ ಅನುಕೂಲಕ್ಕಾಗಿ ಸಂಘದ ಹಿರಿಯ ಸದಸ್ಯ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರವರ  ಪ್ರದೇಶಾಭಿವೃದ್ಧಿ ಅನುದಾನದಿಂದ  ಸುಮಾರು 10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಗ್ರಂಥಾಲಯ ಮತ್ತು ಜನರೇಟರ್ ಸೌಲಭ್ಯಗಳ ಉದ್ಘಾಟನಾ ಕಾರ್ಯಕ್ರಮವು ನಾಳೆ ಅಪರಾಹ್ನ 1 ಗಂಟೆಗೆ ಸರಿಯಾಗಿ ವಕೀಲರ ಭವನದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕರಾದ ಪ್ರತಾಪ ಸಿಂಹ ನಾಯಕ್ ರವರು ನಡೆಸಲಿದ್ದು ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ್ ರವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಶ್ರೇಣಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಮನು ಬಿ ಕೆ, ಪ್ರಧಾನ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ರಾಮಲಿಂಗಪ್ಪ, ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್, ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಮತ್ತು ಹಿರಿಯ ವಕೀಲರ ಸಮಿತಿ ಅಧ್ಯಕ್ಷರಾದ ಶಿವ ಕುಮಾರ್ ಎಸ್ ಎಂ ಭಾಗವಹಿಸಲಿದ್ದಾರೆ.

- Advertisement -

Latest News

error: Content is protected !!