Saturday, August 29, 2026
Homeತಾಜಾ ಸುದ್ದಿಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಮತ್ತೆ ಶುರುವಾಗಿದೆ ಪೋಸ್ಟರ್ ವಾರ್

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಮತ್ತೆ ಶುರುವಾಗಿದೆ ಪೋಸ್ಟರ್ ವಾರ್

- Advertisement -
- Advertisement -

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಬಿಡದಿ ಬೈರಮಂಗಲ ಸುತ್ತಮುತ್ತ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧದ ಪೋಸ್ಟರ್  ಕಾಣಿಸಿಕೊಂಡಿವೆ. ಕಾಂಗ್ರೆಸ್ ಕಾರ್ಯಕರ್ತರು ಈ ಪೋಸ್ಟರ್ ಗಳನ್ನು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಹೆಚ್ಡಿಕೆ ಹಾಕಿದ ಸವಾಲು ಪ್ರತಿ ಸವಾಲುಗಳನ್ನು ಪೋಸ್ಟರ್ ಮೂಲಕ ತೋರಿಸಲಾಗಿದೆ. ಪೋಸ್ಟರ್ ನಲ್ಲಿ ಹೆಚ್ ಡಿ ಕುಮಾರಸ್ವಾಮಿ ಹಲಗೆವಡರಹಳ್ಳಿ ಮತ್ತು ಕೇತಗಾನಹಳ್ಳಿ ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದ್ದು, ಜೈಲಿಗೆ ಹೋಗಲು ಸಿದ್ದರಾಗಿ ಎಂದು ಬರೆಯಲಾಗಿದೆ.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಜೈಲಿಗೆ ಹೋಗುವ ಬಗ್ಗೆ ಹೇಳಿಕೆ ನೀಡಿದ್ದರು. ಆ ಹೇಳಿಕೆ ಆಧರಿಸಿ‌ ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಮಾಡಲಾಗಿದೆ.

- Advertisement -

Latest News

error: Content is protected !!