Wednesday, June 24, 2026
HomeUncategorizedನೆಲ್ಯಾಡಿ; ಪೆರಿಯಶಾಂತಿಯಲ್ಲಿ ಎರಡು ಬೈಕ್ ಗಳ ಮಧ್ಯೆ ಭೀಕರ ಅಪಘಾತ; ಓರ್ವ ಬೈಕ್ ಸವಾರ ಸ್ಥಳದಲ್ಲೇ...

ನೆಲ್ಯಾಡಿ; ಪೆರಿಯಶಾಂತಿಯಲ್ಲಿ ಎರಡು ಬೈಕ್ ಗಳ ಮಧ್ಯೆ ಭೀಕರ ಅಪಘಾತ; ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ನೆಲ್ಯಾಡಿ; ಎರಡು ಬೈಕ್ ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ  ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಕಾಸರಗೋಡು ಜಿಲ್ಲೆಯ ಏರಿಕ್ಕುಲಮ್ ನಿವಾಸಿ ರಿಜೇಶ್.ವಿ (33) ಮೃತ ದುರ್ದೈವಿ. ಅಪಘಾತದಲ್ಲಿ  ಮತ್ತೋರ್ವ ಬೈಕ್ ಸವಾರನನ್ನು ಕೊಕ್ಕಡ ಗ್ರಾಮದ ಹಳಿಂಗೇರಿ ನಿವಾಸಿ ಹಾಗೂ ಸಂಗಮ್ ಪಿಕಪ್ ವಾಹನದ ಚಾಲಕ ಗಿರೀಶ್ ತಲೆ ಮತ್ತು ದೇಹಕ್ಕೆ ಗಂಭೀರವಾಗಿ ಗಾಯಗಳಾಗಿವೆ.

ಗಿರೀಶ್ ಅವರು ಗುಂಡ್ಯ ಕಡೆಯಿಂದ ಕೊಕ್ಕಡ ಕಡೆಗೆ ತಮ್ಮ ಬೈಕ್‌ನಲ್ಲಿ ಬರುತ್ತಿದ್ದರು. ಪೆರಿಯಶಾಂತಿ ತಲುಪಿದಾಗ ಅವರು ಕೊಕ್ಕಡ ರಸ್ತೆಯ ಕಡೆಗೆ ತಮ್ಮ ಬೈಕನ್ನು ತಿರುಗಿಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗವಾಗಿ ಬರುತ್ತಿದ್ದ ಮತ್ತೊಂದು ಬೈಕ್ ಗಿರೀಶ್ ಅವರ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ರಿಜೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು, ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಸದ್ದು ಕೇಳಿ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಸಾರ್ವಜನಿಕರು ತೀವ್ರವಾಗಿ ಗಾಯಗೊಂಡಿದ್ದ ಗಿರೀಶ್ ಅವರನ್ನು ರಕ್ಷಿಸಿದ್ದಾರೆ. ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!