Wednesday, June 24, 2026
Homeಕರಾವಳಿಬೆಳ್ತಂಗಡಿ : ಗ್ರಾಮ ಆಡಳಿತತಾಧಿಕಾರಿಯಿಂದ ವ್ಯಕ್ತಿಯ ಕೊಲೆ: ಆರೋಪಿ ಜಯಚಂದ್ರ ಪ್ರಕರಣದ ಬಳಿಕ ಪರಾರಿ

ಬೆಳ್ತಂಗಡಿ : ಗ್ರಾಮ ಆಡಳಿತತಾಧಿಕಾರಿಯಿಂದ ವ್ಯಕ್ತಿಯ ಕೊಲೆ: ಆರೋಪಿ ಜಯಚಂದ್ರ ಪ್ರಕರಣದ ಬಳಿಕ ಪರಾರಿ

- Advertisement -
- Advertisement -

ಬೆಳ್ತಂಗಡಿ : ಗ್ರಾಮಾಡಳಿತಾಧಿಕಾರಿ ಜಯಚಂದ್ರ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಬಗ್ಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಹಳ್ಳಿಯಲ್ಲಿ ಜೂ.22 ರಂದು ನಡೆದಿದೆ.

ಮಂಡ್ಯ ಜಿಲ್ಲೆಯ ಶೆಟ್ಟಿಹಳ್ಳಿ ನಿವಾಸಿಯಾಗಿರುವ ಜಯಚಂದ್ರ ಸಂಜೆ ಮನೆ ಸಮೀಪದ ಅಂಗಡಿ ಬಳಿ ಕುಳಿತಿದ್ದ ಗಣೇಶ್(42) ಜೊತೆ ಜಗಳ ತೆಗೆದು ಹಲ್ಲೆ ಮಾಡಿ, ಕೊಲೆ ಮಾಡಿದ ಆತ ಪರಾರಿಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕೆಮಿಂಜೆ ಗ್ರಾಮ ಆಡಳಿತ ಅಧಿಕಾರಿ ಆಗಿರುವ ಜಯಚಂದ್ರ ಈ ಹಿಂದೆ ಬೆಳ್ತಂಗಡಿ ತಾಲೂಕಿನ ಬಾರ್ಯ, ತೆಕ್ಕಾರು ಗ್ರಾಮದಲ್ಲಿ ವಿ.ಎ.ಆಗಿ ಕರ್ತವ್ಯ ನಿರ್ವಹಿಸಿದ್ದ. ಬೆಳ್ತಂಗಡಿ ಆಡಳಿತ ಸೌಧದದಲ್ಲಿ ಕೇಸ್ ವರ್ಕರ್ ಆಗಿರುವ ವೇಳೆ 94 ಸಿ ಅಕ್ರಮ ಸಕ್ರಮ ದಾಖಲೆಗಳ ಗೋಲ್ ಮಾಲ್ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮೂರು ತಿಂಗಳು ಜೈಲಿನಲ್ಲಿದ್ದ ಬಳಿಕ ಪುತ್ತೂರು ತಾಲೂಕಿಗೆ ವರ್ಗಾವಣೆಯಾಗಿದ್ದ.ಜೂ.22 ರಂದು ರಾತ್ರಿ ವೇಳೆ ಗಣೇಶ್ ಅವರು ತನ್ನ ಮನೆಯ ಸಮೀಪದ ಅಂಗಡಿಯೊಂದರ ಬಳಿ ಕುಳಿತಿದ್ದರು. ಅದೇ ವೇಳೆ ಅಲ್ಲಿಗೆ ಬಂದ ಜಯಚಂದ್ರ ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದುದನ್ನು ಗಮನಿಸಿದ ಗಣೇಶ್, ಸಾರ್ವಜನಿಕರನ್ನು ಬೈಯ್ಯದಂತೆ ಆತನಿಗೆ ಬುದ್ದಿವಾದ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಜಯಚಂದ್ರ ಏಕಾಏಕಿ ಗಣೇಶ್ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಬಳಿಕ ಗ್ರಾಮಸ್ಥರು ಅಡ್ಡಬಂದು ಅವರಿಬ್ಬರನ್ನೂ ಸಮಾಧಾನಪಡಿಸಿ ಮನೆಗಳಿಗೆ ತೆರಳುವಂತೆ ಹೇಳಿ ಅಲ್ಲಿಂದ ಕಳುಹಿಸಿದ್ದರು. ಬಳಿಕ, ಏನೂ ಆಗಿಲ್ಲವೆಂಬಂತೆ ವರ್ತಿಸಿದ್ದ ಜಯಚಂದ್ರ ಅಲ್ಲಿ ಗಣೇಶ್ ಅವರನ್ನು ತಬ್ಬಿಕೊಂಡು ಅಲ್ಲಿಂದ ಮನೆಗೆ ಕರೆದುಕೊಂಡು ಹೋಗಿ ಮನೆಯ ಕೋಣೆಗೆ ಚಿಲಕ ಹಾಕಿ ಮರದ ಕಟ್ಟಿಗೆಯಿಂದ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಗಣೇಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿಷಯ ತಿಳಿದ ಸಂಬಂಧಿಕರು ತಕ್ಷಣ ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮತ್ತೆ ಮನೆಗೆ ಕರೆತಂದಿದ್ದಾರೆ.

ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಗಣೇಶ್ ಅವರು ಜೂ.23 ರಂದು ಬೆಳಗಿನ ಜಾವ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಗಣೇಶ್ ಅವರ ಮೃತದೇಹವನ್ನು ಮಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.ಹಲ್ಲೆ ನಡೆಸಿ, ಕೊಲೆಗೈದ ಆರೋಪಿ ಗ್ರಾಮ ಆಡಳಿತಾಧಿಕಾರಿ ಜಯಚಂದ್ರ ಪರಾರಿಯಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಮದ್ದೂರಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆ ನಡೆದ ಸ್ಥಳವನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರನ್ನು ಕರೆಸಿ ಮಹಜರು ನಡೆಸಲಾಯಿತು. ಸ್ಥಳದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತಂಡವನ್ನು ನಿಯೋಜಿಸಲಾಗಿದ್ದು, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕೆ.ಎಂ.ದೊಡ್ಡಿ ಪೊಲೀಸರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ, ಡಿವೈಎಸ್ಪಿ ಯಶವಂತ್ ಹಾಗೂ ಪಿಐ ಆನಂದ ಅವರು ಕೆ.ಶೆಟ್ಟಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!