Thursday, June 25, 2026
Homeತಾಜಾ ಸುದ್ದಿಸ್ಯಾಂಡಲ್​ವುಡ್ ಖ್ಯಾತ ನಟಿ ಕೃಷಿ ತಾಪಂಡಗೆ ಮತ್ತೊಂದು ಸಂಕಷ್ಟ:ಕೃಷಿ ಮನೆಯಲ್ಲಿ ಉದ್ಯಮಿ ವೈಶಾಖ್ ಆತ್ಮಹತ್ಯೆ

ಸ್ಯಾಂಡಲ್​ವುಡ್ ಖ್ಯಾತ ನಟಿ ಕೃಷಿ ತಾಪಂಡಗೆ ಮತ್ತೊಂದು ಸಂಕಷ್ಟ:ಕೃಷಿ ಮನೆಯಲ್ಲಿ ಉದ್ಯಮಿ ವೈಶಾಖ್ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರು; ಸ್ಯಾಂಡಲ್​ವುಡ್ ಖ್ಯಾತ ನಟಿ ಕೃಷಿ ತಾಪಂಡಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೃಷಿ ಮನೆಯಲ್ಲಿ ಉದ್ಯಮಿ ವೈಶಾಖ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆರ್.ಆರ್. ನಗರದ ಪ್ರತಿಷ್ಠಿತ ‘ಎಲಿಗಂಟ್ಸ್ ಅಪಾರ್ಟ್‌ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಸದ್ಯದ ಮಾಹಿತಿ ಪ್ರಕಾರ, ನಿನ್ನೆ ರಾತ್ರಿ ನಟಿ ಕ್ರಿಷಿ ತಾಪಂಡ  ಫ್ಲಾಟ್‌ಗೆ ಬಂದಿದ್ದ ವೈಶಾಖ್, ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ನಟಿ ಕ್ರಿಷಿ ತಾಪಂಡ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ವೈಶಾಖ್ ಸಾವಿನ ವಿಷಯ ತಿಳಿಯುತ್ತಿದ್ದಂತೆ ಅಪಾರ್ಟ್‌ಮೆಂಟ್‌ಗೆ ಧಾವಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ. ಸದ್ಯ ವೈಶಾಕ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿಗೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿ ಅವರಿಗೆ ಬೆದರಿಕೆ ಹಾಕಿದ ಮತ್ತು ಬ್ಲ್ಯಾಕ್‌ಮೇಲ್ ಮಾಡಿದ ಪ್ರಕರಣದಲ್ಲಿ ಇದೇ ವೈಶಾಖ್ ಅವರನ್ನು ಪೊಲೀಸರು ಬಂಧಿಸಿದ್ದರು.

- Advertisement -

Latest News

error: Content is protected !!