- Advertisement -


- Advertisement -
ಮಂಗಳೂರು; ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಮುಳ್ಳುಗುಡ್ಡೆ ನಿವಾಸಿ ಅಬ್ಬಾಸ್ ಪ್ರಾಯ (50) ಬಂಧಿತ ಆರೋಪಿ.
ಆರೋಪಿ ಬಳಿಯಿದ್ದ ಸುಮಾರು 2 ಲಕ್ಷ ರೂ ಮೌಲ್ಯದ 4 K.G ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 45/2026 ಕಲಂ : 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಣಂಬೂರು ACP ತಂಡ ಹಾಗೂ ಮುಲ್ಕಿ ಠಾಣೆಯ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.
- Advertisement -


