- Advertisement -


- Advertisement -
ಮಂಗಳೂರು: ಪ್ರಕರಣವೊಂದರಲ್ಲಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸರು ದಿನಾಂಕ 24-06-2026 ರಂದು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ಕುಂಟಲ್ಪಾಡಿ ನಿವಾಸಿ ಪ್ರಸಾದ(33) ಬಂಧಿತ ಆರೋಪಿ.
ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ನ್ಯಾಯಾಲಯವು ಈ ಪ್ರಕರಣವನ್ನು ಎಲ್ ಪಿ ಸಿ ಪ್ರಕರಣವಾಗಿ ಪರಿವರ್ತಿಸಿತ್ತು. ಆರೋಪಿತನ ವಿರುದ್ಧ ಹಿರಿಯಡ್ಕ, ಕೋಣಾಜಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿರುತ್ತದೆ.
ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿರುತ್ತದೆ.
- Advertisement -


