Friday, June 26, 2026
Homeಕರಾವಳಿಉಡುಪಿಉಡುಪಿ: ಆಗುಂಬೆ ಘಾಟಿಯಲ್ಲಿ  ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

ಉಡುಪಿ: ಆಗುಂಬೆ ಘಾಟಿಯಲ್ಲಿ  ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ

- Advertisement -
- Advertisement -

ಉಡುಪಿ: ಆಗುಂಬೆ ಘಾಟಿಯಲ್ಲಿ  ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.  ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಸಾಧ್ಯತೆಯಿರೋದರಿಂದ  ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ.


ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ-ನಗರ-ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಮತ್ತು ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸಬೇಕು. ನರಸಿಂಹರಾಜಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕೊಪ್ಪ-ಜಯಪುರ-ಬಾಳೆಹೊಳೆ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!