Friday, June 26, 2026
Homeಕರಾವಳಿಮಂಗಳೂರುಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ  ಮಾದಕ ವಸ್ತು ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಸುರತ್ಕಲ್ ನ ಹೊಸಬೆಟ್ಟುವಿನಲ್ಲಿ ವಾಸವಿದ್ದ ಅಣ್ಣಪ್ಪ ಸ್ವಾಮಿ @ ಮನು ಬಂಧಿತ ಆರೋಪಿ.

ಆರೋಪಿ ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಿನಾಂಕ 25-06-2026ರಂದು ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ₹1,50,000 ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,10,500/- ಆಗಿರುತ್ತದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಅಣ್ಣಪ್ಪ ಸ್ವಾಮಿ @ ಮನು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ. ಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ  ಹಲ್ಲೆ ಹಾಗೂ ಮಸೀದಿಗೆ ಕಲ್ಲು ಎಸೆದಿರುವ ಪ್ರಕರಣ ಮತ್ತು ಉಳ್ಳಾಲ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿರುತ್ತದೆ. ಈ ಯಶಸ್ವಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸಿದ್ದು, ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

- Advertisement -

Latest News

error: Content is protected !!