
ಪುತ್ತೂರು; ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಇಬ್ಬರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನಾಂಕ;- 25.06.2026 ರಂದು ಸಂಜೆ, ಉಪನಿರೀಕ್ಷಕರಾದ ಸುಷ್ಮಾ ಜಿ. ಭಂಡಾರಿ ರವರಿಗೆ ಅಕ್ರಮ ಗೋಸಾಗಾಟದ ಬಗ್ಗೆ ಬಂದ ಮಾಹಿತಿಯ ಮೇರೆಗೆ, ಸದ್ರಿಯವರು ಸಿಬ್ಬಂದಿಯೊಂದಿಗೆ ಪುತ್ತೂರು ಆರ್ಯಾಪು ಗ್ರಾಮದ ಮರಕ್ಕ ಎಂಬಲ್ಲಿ KA 21 5450 ನೋಂದಣಿಯ ಪಿಕ್ ಅಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ಒಂದು ಜಾನುವಾರನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ವಾಹನದ ಚಾಲಕ ನಾರಾಯಣ ಹಾಗ ಇನ್ನೋರ್ವ ಸಹಪ್ರಯಾಣಿಕ ಮೊಯ್ದುಕುಂಞ ಎಂಬವರುಗಳಲ್ಲಿ ವಿಚಾರಿಸಿದಾಗ ಯಾವುದೇ ಪೂರ್ವಾನುಮತಿ ಹಾಗು ಅಗತ್ಯ ದಾಖಲಾತಿಗಳು ಇಲ್ಲದಿರುವುದು ದೃಢಪಟ್ಟಿರುತ್ತದೆ. ಮುಂದಿನ ಕಾನೂನು ಕ್ರಮಕ್ಕಾಗಿ ಜಾನುವಾರಗಳನ್ನು ಹಾಗೂ ವಾಹನವನ್ನು ಸ್ವಾಧೀನಪಡಿಸಿ, ಆರೋಪಿಗಳ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 95-20262, ಕಲಂ: 5, 7, 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ; 11(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 19603 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ


