
ಪುತ್ತೂರು: ಅಪ್ರಾಪ್ತರು ಚಲಾಯಿಸುತ್ತಿದ್ದ ಸ್ಕೂಟರ್ ಕಾರಿಗೆ ಡಿಕ್ಕಿಯಾದ ಘಟನೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ತಾರಿಪಡ್ಪು ಎಂಬಲ್ಲಿ ನಡೆದಿದೆ. ಈ ಬಗ್ಗೆ ಮೈಸೂರು ಪಿರಿಯಾಪಟ್ಟಣ ನಿವಾಸಿ ರಾಜು ಎಂಬವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೈಸೂರು ಪಿರಿಯಾಪಟ್ಟಣ ನಿವಾಸಿ ರಾಜು ಅವರು ದಿನಾಂಕ:26.06.2026 ರಂದು ಬೆಳಿಗ್ಗೆ ಸುಳ್ಯ ರಾಮಕುಮೇರಿ ಎಂಬಲ್ಲಿಂದ ತಮ್ಮ ಮಾರುತಿ ಸ್ವಿಪ್ಟ್ ಕಾರಿನಲ್ಲಿ ಬಲ್ನಾಡು ಗ್ರಾಮದ ತಾರಿಪಡ್ಪು ಎಂಬಲ್ಲಿಗೆ ತಲುಪಿದಾಗ, ಎದುರುಗಡೆಯಿಂದ ಅಪ್ರಾಪ್ತರಿಬ್ಬರು ಸ್ಕೂಟರನ್ನು ನಿರ್ಲಕ್ಷ್ಯ ಮತ್ತು ದುಡುಕುತನದಿಂದ ಬಲಾಯಿಸಿಕೊಂಡು ಬಂದು ರಾಜು ಅವರ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ಪರಿಣಾಮ ಸ್ಕೂಟರ್ ನಲ್ಲಿದ್ದ ಇಬ್ಬರಿಗೂ ಗಾಯಗಳಾಗಿದ್ದು, ಅವರುಗಳನ್ನು ಆಂಬ್ಯುಲೆನ್ಸ್ ವಾಹನದಲ್ಲಿ ಚಿಕಿತ್ಸೆಗೆ ಕಳುಹಿಸಿಕೊಟ್ಟಿದ್ದು, ಸ್ಕೂಟರ್ ಸಂಪೂರ್ಣ ಜಖಂಗೊಂಡಿರುತ್ತದೆ ಈ ಬಗ್ಗೆ ರಾಜು ಅವರು ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


