Saturday, June 27, 2026
Homeಕರಾವಳಿಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಿಲ್ಡಾ ಆಳ್ವ ನಿಧನ

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಿಲ್ಡಾ ಆಳ್ವ ನಿಧನ

- Advertisement -
- Advertisement -

ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಿಲ್ಡಾ ಆಳ್ವ (72) ಅವರು ಅಸೌಖ್ಯದ ಕಾರಣ ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. 1983ರಿಂದ 2001ರ ವರೆಗೆ ಪಾಲಿಕೆಯ ಪಚ್ಚನಾಡಿ ಮತ್ತು ಆಕಾಶಭವನ ವಾರ್ಡ್‌ಗಳ ಸದಸ್ಯೆಯಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದ ಅವರು, 1998-99ರ ಅವಧಿಯಲ್ಲಿ ಮಂಗಳೂರಿನ ಎರಡನೇ ಮಹಿಳಾ ಮೇಯರ್ ಆಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ರಾಜಕೀಯವಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಸೇರಿದಂತೆ ಪಕ್ಷದ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಹಿಲ್ಡಾ ಆಳ್ವ ಅವರು, ಕಾವೂರಿನಲ್ಲಿ ವಾಸವಾಗಿದ್ದರು. ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಇವರು, ಕೆಥೋಲಿಕ್ ಮಹಿಳಾ ಸರಕಾರಿ ಸಂಘವನ್ನು ಸ್ಥಾಪಿಸಿ ಅದರ ಪ್ರಥಮ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕೊಂಕಣಿ ಅಕಾಡಮಿಯ ಅಧ್ಯಕ್ಷ ಜೋಕೀಂ ಸ್ಟ್ಯಾನಿ ಅಲ್ವಾರಿಸ್ ಹಾಗೂ ಮಾಜಿ ಮೇಯರ್ ಶಶಿಧರ ಹೆಗ್ಡೆ ಸೇರಿದಂತೆ ಹಲವು ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

- Advertisement -

Latest News

error: Content is protected !!