- Advertisement -


- Advertisement -
ಮಂಗಳೂರು: ದ.ಕ. ಜಿಲ್ಲಾ ಮಟ್ಟದ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ಚಾಲನೆ ನೀಡಲಾಯಿತು.
ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್ .ತಿಮ್ಮಯ್ಯ , ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ.ದುರ್ಗಾಪ್ರಸಾದ್ ಎಂ.ಆರ್, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ. ರಾಜೇಶ್ ಬಿ.ವಿ., ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೇಪಾಡಿ ಮತ್ತಿತರರು ಉಪಸ್ಥಿತರಿದ್ದರು.
- Advertisement -


