Sunday, June 28, 2026
HomeUncategorized150 ಅಡಿ ಆಳದ ಬಾವಿಗೆ ಬಿದ್ದ ಟ್ಯಾಂಕರ್; ಚಾಲಕ ಸ್ಥಳದಲ್ಲೇ ಸಾವು

150 ಅಡಿ ಆಳದ ಬಾವಿಗೆ ಬಿದ್ದ ಟ್ಯಾಂಕರ್; ಚಾಲಕ ಸ್ಥಳದಲ್ಲೇ ಸಾವು

- Advertisement -
- Advertisement -

ಬಾಗಲಕೋಟೆ: 150 ಅಡಿ ಆಳದ ಬಾವಿಗೆ ಟ್ಯಾಂಕರ್ ಬಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಮಖಂಡಿ ತಾಲೂಕಿನ ಹುನ್ನೂರ ಗ್ರಾಮದ ಬಳಿ ನಡೆದಿದೆ. ಮಂಜುನಾಥ ಆಟವಾಳಕರ್ ಮೃತ ಚಾಲಕ.

ಕಾರ್ಖಾನೆಯೊಂದರ ತ್ಯಾಜ್ಯವನ್ನು ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಬಾವಿಗೆ ಉರುಳಿ ಬಿದ್ದಿದೆ. ಆಳವಾದ ಬಾವಿಗೆ ಬಿದ್ದ ರಭಸಕ್ಕೆ ಚಾಲಕ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ದಾರುಣವಾಗಿ ಕೊನೆಯುಸಿರೆಳೆದಿದ್ದಾರೆ. ಮೃತ ಮಂಜುನಾಥ್ ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದ ನಿವಾಸಿಯಾಗಿದ್ದು, ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು.

ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಜಮಖಂಡಿ ಗ್ರಾಮೀಣ ಠಾಣೆಯ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!