- Advertisement -


- Advertisement -
ಕೇಂದ್ರ ಸರ್ಕಾರವು ಜುಲೈ 1ರಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿನ ಎಲ್ಲಾ ನಿಯಮ ಹಾಗೂ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಭಾನುವಾರ ಹೊಸ ಆದೇಶ ಹೊರಡಿಸಿದೆ.
ದೇಶದ ಇಂಧನ ಪೂರೈಕೆ ಮತ್ತು ವಿತರಣಾ ವ್ಯವಸ್ಥೆಯನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಹಿಂದೆ ಜೂನ್ 11ರಂದು ಜಾರಿಗೊಳಿಸಲಾಗಿದ್ದ ಕಟ್ಟುನಿಟ್ಟಿನ ನಿಯಮಗಳು ಇನ್ನು ಮುಂದೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಇದರಿಂದಾಗಿ, ಪ್ರತಿ ವ್ಯಕ್ತಿಗೆ ಗರಿಷ್ಠ 200 ಲೀಟರ್ ಡೀಸೆಲ್ ಮಾತ್ರ ಮಾರಾಟ ಮಾಡಬೇಕೆಂಬ ಮಿತಿಯನ್ನು ಹಿಂಪಡೆಯಲಾಗಿದೆ. ಅಷ್ಟೇ ಅಲ್ಲದೆ, ಕೈಗಾರಿಕಾ ಹಾಗೂ ವಾಣಿಜ್ಯ ಬಳಕೆದಾರರು ಚಿಲ್ಲರೆ ಮಾರಾಟ ಮಳಿಗೆಗಳಿಂದ ಇಂಧನ ಖರೀದಿಸುವುದರ ಮೇಲಿದ್ದ ನಿಷೇಧವೂ ರದ್ದಾಗಿದ್ದು, ಜುಲೈ 1ರಿಂದ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವು ಎಂದಿನಂತೆ ಮುಕ್ತವಾಗಿ ಮತ್ತು ಸಾಮಾನ್ಯ ಕ್ರಮದಲ್ಲಿ ನಡೆಯಲಿದೆ.
- Advertisement -


