
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಅವರ ಅಧ್ಯಕ್ಷತೆಯಲ್ಲಿ ಆನ್‌ಲೈನ್ ಮೂಲಕ ನಡೆದ ಪ್ರಸಕ್ತ ಸಾಲಿನ ಮೊದಲ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಮಹತ್ವದ ತೀರ್ಮಾನವೊಂದನ್ನು ಕೈಗೊಳ್ಳಲಾಗಿದೆ.
ಸರ್ಕಾರದ ಆದೇಶದನ್ವಯ ವಿದ್ಯಾರ್ಥಿಗಳ ದಾಖಲಾತಿ ಇಲ್ಲದ ಹಳೆಯ ಕೋರ್ಸ್ ಕಾಂಬಿನೇಷನ್‌ಗಳನ್ನು ರದ್ದುಗೊಳಿಸಿ, ಅವುಗಳ ಬದಲಿಗೆ ಹೊಸ ಉದ್ಯೋಗ ಆಧಾರಿತ ಕೋರ್ಸ್‌ಗಳನ್ನು ಆರಂಭಿಸಲು ಒಪ್ಪಿಗೆ ನೀಡಲಾಗಿದೆ. ಈ ತೀರ್ಮಾನದ ಹಿನ್ನೆಲೆಯಲ್ಲಿ ಮಂಗಳೂರಿನ ಕಾವೂರು ಸರಕಾರಿ ಕಾಲೇಜಿನಲ್ಲಿ ಅರ್ಥಶಾಸ್ತ್ರ, ಇತಿಹಾಸ, ಸಮಾಜಶಾಸ್ತ್ರ ಹಾಗೂ ಇತಿಹಾಸ, ಪತ್ರಿಕೋದ್ಯಮ, ಕನ್ನಡ ಕಾಂಬಿನೇಷನ್‌ಗಳನ್ನು ಬಂದ್ ಮಾಡಲಾಗಿದ್ದು, ಪುಂಜಾಲಕಟ್ಟೆ ಸರಕಾರಿ ಕಾಲೇಜಿನ ಅರ್ಥಶಾಸ್ತ್ರ, ಕನ್ನಡ ಮತ್ತು ಸಮಾಜಶಾಸ್ತ್ರ ಕಾಂಬಿನೇಷನ್ ಅನ್ನು ಸಹ ರದ್ದುಗೊಳಿಸಲಾಗಿದೆ.
ಇದರೊಂದಿಗೆ ಉಡುಪಿಯ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನಲ್ಲಿ ಚಾಲ್ತಿಯಲ್ಲಿದ್ದ ಇಂಗ್ಲಿಷ್, ಇತಿಹಾಸ ಮತ್ತು ರಾಜ್ಯಶಾಸ್ತ್ರ ಕಾಂಬಿನೇಷನ್‌ಗಳನ್ನು ಸಹ ಮುಚ್ಚಲು ನಿರ್ಧರಿಸಲಾಗಿದೆ.


