- Advertisement -


- Advertisement -
ಮಾಜಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಹಾಗೂ ಮಾಜಿ ಹಣಕಾಸು ಕಾರ್ಯದರ್ಶಿಯಾದ ರಾಜೀವ್ ಕುಮಾರ್ ಅವರು ಎಚ್‌ಡಿಎಫ್‌ಸಿ (HDFC) ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಕಳೆದ ಮಾರ್ಚ್‌ನಲ್ಲಿ ನೈತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದ ಅತನು ಚಕ್ರವರ್ತಿ ಅವರ ಸ್ಥಾನವನ್ನು ರಾಜೀವ್ ಕುಮಾರ್ ತುಂಬಲಿದ್ದಾರೆ. ಇವರನ್ನು ಜೂನ್ 30, 2026ರಿಂದ ಜಾರಿಗೆ ಬರುವಂತೆ ನಾಲ್ಕು ವರ್ಷಗಳ ಅವಧಿಗೆ ಸ್ವತಂತ್ರ ನಿರ್ದೇಶಕರನ್ನಾಗಿ ನೇಮಿಸಲು ಎಚ್‌ಡಿಎಫ್‌ಸಿ ಬ್ಯಾಂಕ್‌ನ ನಿರ್ದೇಶಕರ ಮಂಡಳಿಯು ಅನುಮೋದನೆ ನೀಡಿದೆ.
ಇದರೊಂದಿಗೆ, ಮೂರು ವರ್ಷಗಳ ಅವಧಿಗೆ ಬ್ಯಾಂಕ್‌ನ ಅರೆಕಾಲಿಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಕೂಡ ಮಂಡಳಿಯು ಒಪ್ಪಿಗೆ ಸೂಚಿಸಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅನುಮೋದನೆ ನೀಡಿದ ದಿನಾಂಕದಿಂದ ಈ ನೇಮಕಾತಿಯು ಅಧಿಕೃತವಾಗಿ ಜಾರಿಗೆ ಬರಲಿದೆ ಎಂದು ಬ್ಯಾಂಕ್ ತಿಳಿಸಿದೆ.
- Advertisement -


