- Advertisement -


- Advertisement -
ಉಡುಪಿ : ದೈವಸ್ಥಾನಗಳಲ್ಲಿ ಕಾಣಿಕೆ ಡಬ್ಬಿ ಕಳ್ಳತನ ಮಾಡಿದ್ದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ ಮುದುಕಪ್ಪ (27) ಬಂಧಿತ ಆರೋಪಿ.
ಘಟನಾ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಯ ಚಲನವಲನಗಳನ್ನು ಪತ್ತೆಹಚ್ಚಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ವಿವಿಧ ದೇವಸ್ಥಾನಗಳ ಹುಂಡಿ ಹಾಗೂ ಕಾಣಿಕೆ ಡಬ್ಬಿ ಕಳವು ಪ್ರಕರಣಗಳಲ್ಲಿಯೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದು, ಇನ್ನಷ್ಟು ಕಳವು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
- Advertisement -


