- Advertisement -


- Advertisement -
ಮಂಗಳೂರು: ವಿದ್ಯಾರ್ಥಿ ಮನೆ ಬಿಟ್ಟು ಹೋಗಿ ನಾಪತ್ತೆಯಾಗಿರುವ ಘಟನೆ ಶಕ್ತಿನಗರದ ಕ್ಯಾಸ್ಟೊಲಿನೋ ಕಾಲೋನಿಯಲ್ಲಿ ನಡೆದಿದೆ. ಸ್ಪರ್ಶ್ ಭೂಷಣ್ ಸಿಂಗ್ (19) ನಾಪತ್ತೆಯಾದ ವಿದ್ಯಾರ್ಥಿ. ಜೂನ್ 29 ರಂದು ಮನೆಯವರೊಂದಿಗೆ ಜಗಳವಾಡಿದ ಸ್ಪರ್ಶ್ ಬ್ಯಾಗ್ ಹಿಡಿದುಕೊಂಡು ಮನೆ ಬಿಟ್ಟು ಹೋದವರು ಕಾಣೆಯಾಗಿದ್ದು, ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ: ಎತ್ತರ 5.4 ಅಡಿ, ಎಣ್ಣೆಕಪ್ಪು ಮೈಬಣ್ಣ, ಕಪ್ಪು ಕೂದಲು, ಸಪೂರ ಶರೀರ ಹೊಂದಿರುತ್ತಾರೆ. ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಕಪ್ಪು ಬಣ್ಣದ ಟಿ-ಶರ್ಟ್, ಕ್ರೀಮ್ ಬಣ್ಣದ ಪ್ಯಾಂಟ್ ಧರಿಸಿದ್ದರು. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಮಂಗಳೂರು ಗ್ರಾಮಾಂತರ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


