Thursday, July 2, 2026
Homeಚಿಕ್ಕಮಗಳೂರುಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಪೊಲೀಸರಿಂದ ತೀವ್ರ ಶೋಧ

ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಪೊಲೀಸರಿಂದ ತೀವ್ರ ಶೋಧ

- Advertisement -
- Advertisement -

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಜುಲೈ 02 ಗುರುವಾರದಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಮಧ್ಯಾಹ್ನ 1.30ರಿಂದ 3.30ರ ಒಳಗೆ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ದುಷ್ಕರ್ಮಿಗಳು ಸಂದೇಶ ಕಳುಹಿಸಿದ್ದಾರೆ.

ಈ ಇ-ಮೇಲ್ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ನ್ಯಾಯಾಲಯದ ಕಲಾಪಗಳು ನಡೆಯುತ್ತಿರುವ ಮಧ್ಯೆಯೇ ಬಾಂಬ್ ಪತ್ತೆ ದಳ ಮತ್ತು ಶ್ವಾನ ದಳದೊಂದಿಗೆ ಆಗಮಿಸಿದ ಪೊಲೀಸರು ಇಡೀ ಕೋರ್ಟ್ ಆವರಣದಲ್ಲಿ ತೀವ್ರ ಶೋಧ ಕಾರ್ಯ ಹಾಗೂ ಬಿಗಿ ತಪಾಸಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!