
ನವದೆಹಲಿ: ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಕಾಯುತ್ತಿರುವ ವೈದ್ಯಕೀಯ ಅಭ್ಯರ್ಥಿಗಳಿಗೆ ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಇನ್ ಮೆಡಿಕಲ್ ಸೈನ್ಸಸ್ NEET PG 2026 ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.
ದೇಶಾದ್ಯಂತ ನಿಗದಿತ ಪರೀಕ್ಷಾ ಕೇಂದ್ರಗಳಲ್ಲಿ ಕಂಪ್ಯೂಟರ್ ಆಧಾರಿತ ಮೋಡ್‌ನಲ್ಲಿ ಪರೀಕ್ಷೆ ನಡೆಯಲಿದ್ದು, ಇದರೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 1, 2026 ರಿಂದಲೇ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಜುಲೈ 21, 2026 ರ ರಾತ್ರಿ 11:55 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕೊನೆಯ ಕ್ಷಣದಲ್ಲಿ ವೆಬ್‌ಸೈಟ್‌ನಲ್ಲಿ ಉಂಟಾಗುವ ತಾಂತ್ರಿಕ ತೊಂದರೆ ಹಾಗೂ ಹೆವಿ ಟ್ರಾಫಿಕ್ ತಪ್ಪಿಸಲು ಆದಷ್ಟು ಬೇಗ ಅರ್ಜಿ ಸಲ್ಲಿಸುವಂತೆ ಬೋರ್ಡ್ ಸಲಹೆ ನೀಡಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅವರು ಪರೀಕ್ಷೆ ಬರೆಯಲಿರುವ ನಗರದ ಮಾಹಿತಿಯನ್ನು ಆಗಸ್ಟ್ 11, 2026 ರಂದು ಲಭ್ಯಗೊಳಿಸಲಾಗುವುದು. ಇದರಿಂದ ಅಭ್ಯರ್ಥಿಗಳಿಗೆ ಪ್ರಯಾಣ ಮತ್ತು ವಸತಿ ವ್ಯವಸ್ಥೆಯನ್ನು ಮುಂಚಿತವಾಗಿಯೇ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ಇನ್ನು ನಿಗದಿತ ವೇಳಾಪಟ್ಟಿಯಂತೆ ಆಗಸ್ಟ್ 30, 2026 ರಂದು ದೇಶಾದ್ಯಂತ ಪರೀಕ್ಷೆ ನಡೆಯಲಿದ್ದು, ಇದರ ಫಲಿತಾಂಶವು ಸೆಪ್ಟೆಂಬರ್ 30, 2026 ರಂದು ಪ್ರಕಟವಾಗಲಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:
ಮಾನ್ಯತೆ ಪಡೆದ ವೈದ್ಯಕೀಯ ಸಂಸ್ಥೆಯಿಂದ MBBS ಪದವಿ ಅಥವಾ ಪ್ರಾವಿಷನಲ್ MBBS ಉತ್ತೀರ್ಣ ಪ್ರಮಾಣಪತ್ರ ಹೊಂದಿರಬೇಕು.
NMC, ಹಳೆಯ MCI ಅಥವಾ ರಾಜ್ಯ ವೈದ್ಯಕೀಯ ಮಂಡಳಿಯಿಂದ ನೀಡಲಾದ ಕಾಯಂ ಅಥವಾ ತಾತ್ಕಾಲಿಕ ನೋಂದಣಿ ಪ್ರಮಾಣಪತ್ರ ಕಡ್ಡಾಯವಾಗಿದೆ.


