Saturday, July 4, 2026
Homeಕರಾವಳಿಮಂಗಳೂರುಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆ ನೀಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆ ನೀಡಿದ್ದ ಆರೋಪಿ ಅರೆಸ್ಟ್

- Advertisement -
- Advertisement -

ಮಂಗಳೂರು, ಜು. 4: ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ವಂಚನೆಯ ಹಣದ ವಹಿವಾಟಿಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಸಹಕರಿಸುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೊಳ್ನಾಡು ಕುಡ್ತಮುಗೇರು ನಿವಾಸಿ ಜುಬೈರ್ (32) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ.104/2025 ಪ್ರಕರಣದಡಿ (ಐಟಿ ಕಾಯ್ದೆ 66(C), 66(D) ಹಾಗೂ ಭಾರತೀಯ ನ್ಯಾಯ ಸಂಹಿತೆಯ ಕಲಂ 126(2), 308(6), 318(4), 319(2), 3(5)) ಆರೋಪಿಯನ್ನು ಜುಲೈ 3ರಂದು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸರ ತನಿಖೆ ವೇಳೆ ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.180/2022 ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜಿಲ್ಲಾ ಸೈಬರ್ ಅಪರಾಧ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!