Saturday, July 4, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

ಬೆಳ್ತಂಗಡಿ : ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಆರೋಪಿಯ ಬಂಧನ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ವ್ಯಕ್ತಿಯನ್ನು ಅಡ್ಡಗಟ್ಟಿ ಅವಮಾನ ಮಾಡಿ ಜೀವಬೆದರಿಕೆ ಹಾಕಿ ಬಳಿಕ ಅಯುಧದಿಂದ ಹಲ್ಲೆ ಮಾಡಿ ಕೊಲೆ ಯತ್ನ ಮಾಡಿದ ಪ್ರಕರಣದಲ್ಲಿ ಮಂಗಳೂರು 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಬಗ್ಗೆ SC No: 68/2022 ಸುಮಾರು 4 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೆಂಪಕೋಡಿ ನಿವಾಸಿ ಕುಂಯಾ ರವರ ಮಗನಾದ ಆನಂದ (40) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಬೆಳ್ತಂಗಡಿ ಪೊಲೀಸ್ ಉಪವಿಭಾಗ ಡಿವೈಎಸ್ಪಿ ರೋಹಿಣಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ್.ಆರ್.ಗಾಣಿಗೇರ ತಂಡದ ಸಿಬ್ಬಂದಿ ವ್ರಷಭ ಮತ್ತು ಚರಣ್ ರಾಜ್ ರವರು ಕೊಕ್ಕಡದಿಂದ ಜು.4 ರಂದು ಬೆಳಗ್ಗೆ ಬಂಧಿಸಿ ಬಳಿಕ ಮಂಗಳೂರು ನ್ಯಾಯಾಧಿಶರ ಮುಂದೆ ಸಂಜೆ ಹಾಜರುಪಡಿದ್ದಾರೆ. ನ್ಯಾಯಾಧೀಶರು ಆರೋಪಿಗೆ 500 ರೂಪಾಯಿ ದಂಡ ಪಾವತಿಸಿಕೊಂಡು ಸೂಕ್ತ ಭದ್ರತೆಯೊಂದಿಗೆ ಬಿಡುಗಡೆ ಮಾಡಿರುತ್ತಾರೆ.

- Advertisement -

Latest News

error: Content is protected !!