Sunday, July 5, 2026
Homeಕರಾವಳಿಉಡುಪಿಉಡುಪಿ ಬಸ್ ನಿಲ್ದಾಣದಲ್ಲಿ ಮುಂಜಾನೆ ಮದ್ಯ ಮಾರಾಟ: ಪೊಲೀಸರ ಮಿಂಚಿನ ದಾಳಿ, ಆರೋಪಿ ಬಂಧನ

ಉಡುಪಿ ಬಸ್ ನಿಲ್ದಾಣದಲ್ಲಿ ಮುಂಜಾನೆ ಮದ್ಯ ಮಾರಾಟ: ಪೊಲೀಸರ ಮಿಂಚಿನ ದಾಳಿ, ಆರೋಪಿ ಬಂಧನ

- Advertisement -
- Advertisement -

ಉಡುಪಿ ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಬೆಳಗ್ಗಿನ ಜಾವ ಕಾನೂನು ಬಾಹಿರವಾಗಿ ಮದ್ಯದ ಪೊಟ್ಟಣಗಳನ್ನು (ಸ್ಯಾಚೆಟ್) ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿದ್ದವು. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಉಡುಪಿ ನಗರ ಠಾಣೆಯ ಪೊಲೀಸರು ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದಾರೆ.

ಶನಿವಾರ ಮುಂಜಾನೆ ಆರೋಪಿ ಕಂಟ್ಯಪ್ಪ ಮೇಥಿ ತನ್ನ ಸ್ಕೂಟರ್‌ನಲ್ಲಿ ಸಿಟಿ ಬಸ್ ನಿಲ್ದಾಣದ ಬಳಿ ಬಂದು, ಮದ್ಯದ ಪೊಟ್ಟಣಗಳನ್ನು ಯಾರಿಗೂ ಅನುಮಾನ ಬಾರದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ. ಈ ವೇಳೆ ನಿಖರ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಯನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ತಪಾಸಣೆ ನಡೆಸಿದಾಗ ಆತನ ಬಳಿ ಇದ್ದ 4 ಲೀಟರ್ ಅಕ್ರಮ ಮದ್ಯ ಪತ್ತೆಯಾಗಿದ್ದು, ಮದ್ಯ ಹಾಗೂ ಸ್ಕೂಟರ್ ಅನ್ನು ಜಪ್ತಿ ಮಾಡಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

- Advertisement -

Latest News

error: Content is protected !!