- Advertisement -


- Advertisement -
ಕಡಬ: ಚಿನ್ನಾಭರಣಗಳ ತೂಕವನ್ನು ಕೃತಕವಾಗಿ ಹೆಚ್ಚಿಸಿ ಬ್ಯಾಂಕ್‌ಗೆ ಅಡವಿಟ್ಟು ವಂಚಿಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿಯ ಮುಹಮ್ಮದ್ ಫಾಯಿಝ್ (20) ಮತ್ತು ಬಂಟ್ವಾಳ ಕಸಬಾದ ಮುಹಮ್ಮದ್ ಮುರ್ಷೀದ್ (45) ಬಂಧಿತರು.
ಜುಲೈ 3ರಂದು ಕಡಬ ಪೇಟೆಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಇವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ, ಬ್ಯಾಂಕ್‌ನಲ್ಲಿ ಅಡವಿಡಲು ತಂದಿದ್ದ ಸುಮಾರು 120 ಗ್ರಾಂ ಚಿನ್ನಾಭರಣಗಳು ಪತ್ತೆಯಾಗಿವೆ. ಆದರೆ ಈ ಆಭರಣಗಳಿಗೆ ಯಾವುದೇ ಸೂಕ್ತ ದಾಖಲೆಗಳಿರಲಿಲ್ಲ. ಪೊಲೀಸರ ತೀವ್ರ ವಿಚಾರಣೆಯ ವೇಳೆ, ಆಭರಣಗಳ ತೂಕವನ್ನು ಹೆಚ್ಚಿಸಿ ಬ್ಯಾಂಕ್‌ನಿಂದ ಹೆಚ್ಚಿನ ಹಣ ಪಡೆದು ವಂಚಿಸುವ ಸಂಚು ರೂಪಿಸಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಕಡಬ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
- Advertisement -


