Monday, July 6, 2026
Homeಕರಾವಳಿಉಡುಪಿಕುಂದಾಪುರ: ಭಾರಿ ಮಳೆಯ ನಡುವೆ ಜ್ಯುವೆಲ್ಲರಿ ಶಾಪ್‌ಗೆ ಕನ್ನ; 1.44 ಲಕ್ಷ ಮೌಲ್ಯದ ಬೆಳ್ಳಿ ಕಳವು

ಕುಂದಾಪುರ: ಭಾರಿ ಮಳೆಯ ನಡುವೆ ಜ್ಯುವೆಲ್ಲರಿ ಶಾಪ್‌ಗೆ ಕನ್ನ; 1.44 ಲಕ್ಷ ಮೌಲ್ಯದ ಬೆಳ್ಳಿ ಕಳವು

- Advertisement -
- Advertisement -

ಕುಂದಾಪುರ: ತಾಲೂಕಿನ ಮರವಂತೆಯ ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ವಿಶ್ವನಾಥ ಪೂಜಾರಿ ಅವರಿಗೆ ಸೇರಿದ ಜ್ಯುವೆಲ್ಲರಿ ಅಂಗಡಿಯಲ್ಲಿ ಜುಲೈ 4ರ ರಾತ್ರಿ ಭೀಕರ ಕಳ್ಳತನ ನಡೆದಿದೆ. ಅಂದು ರಾತ್ರಿ ಸುರಿದ ಭಾರಿ ಮಳೆಯ ಲಾಭ ಪಡೆದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ.

ಗ್ಯಾಸ್ ಕಟ್ಟರ್ ಬಳಸಿ ಕಳವು: ಕಳ್ಳರು ಗ್ಯಾಸ್ ಕಟ್ಟರ್ ಬಳಸಿ ಜ್ಯುವೆಲ್ಲರಿ ಅಂಗಡಿಯ ಶಟರ್ ಕತ್ತರಿಸಿ ಒಳನುಗ್ಗಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು 1.44 ಲಕ್ಷ ರೂ. ಮೌಲ್ಯದ 600 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ಡ್ರಾಯರ್‌ನಲ್ಲಿದ್ದ 1,000 ರೂ. ನಗದು ಹಣವನ್ನು ದೋಚಿದ್ದಾರೆ. ತಾವು ಸಿಕ್ಕಿಬೀಳಬಾರದೆಂಬ ಉದ್ದೇಶದಿಂದ ಕಳ್ಳರು ಕೃತ್ಯಕ್ಕೂ ಮುನ್ನ ಅಕ್ಕಪಕ್ಕದ ಅಂಗಡಿಗಳ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿದ್ದಾರೆ.

ಸ್ಥಳಕ್ಕೆ ಉನ್ನತಾಧಿಕಾರಿಗಳ ಭೇಟಿ: ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ, ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್, ಗಂಗೊಳ್ಳಿ ಪಿಎಸ್‌ಐ ಪವನ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ವೃತ್ತಿಪರ ಕಳ್ಳರ ಕೈವಾಡ? ಸಿಸಿಟಿವಿ ಕ್ಯಾಮೆರಾಗಳನ್ನು ಹಾನಿಗೊಳಿಸಿರುವುದು ಹಾಗೂ ಭಾರಿ ಮಳೆಯ ಶಬ್ದದ ನಡುವೆ ಗ್ಯಾಸ್ ಕಟ್ಟರ್ ಬಳಸಿ ಶಟರ್ ಕತ್ತರಿಸಿರುವುದನ್ನು ಗಮನಿಸಿದರೆ ಇದು ವೃತ್ತಿಪರ ಕಳ್ಳರ ತಂಡದ ಕೆಲಸ ಎಂದು ಪೊಲೀಸರು ಶಂಕಿಸಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ತೀವ್ರಗೊಂಡಿದೆ.

- Advertisement -

Latest News

error: Content is protected !!