Saturday, August 22, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

- Advertisement -
- Advertisement -

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.6 ರಂದು ಸೋಮವಾರ ರಾತ್ರಿ ನಡೆದಿದೆ.

ಮಂಗಳೂರಿನ ಕಾಲೇಜೊಂದರ ನಾಲ್ಕು ಮಂದಿ ವಿದ್ಯಾರ್ಥಿಗಳು ಎರಡು ಬಾಡಿಗೆ ಸ್ಕೂಟರ್ ಮೂಲಕ ಕೊಟ್ಟಿಗೆಹಾರ ಸಮೀಪದ ದೇವರ ಮನೆಗೆ ಹೋಗಿದ್ದು ಅಲ್ಲಿಂದ ಸಂಜೆ ಹಿಂತಿರುಗುತಿದ್ದ ವೇಳೆ ಲಾಯಿಲ ಬಳಿ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕಿನ ಹಿಂಬದಿ ಸವಾರ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಮಂಗಳೂರು ನೀರುಮಾರ್ಗ ನಿವಾಸಿ ಉಮಾ ಕುಮಾರ್ ಮಗ ಧೀರಜ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದು, ಸವಾರ ಕೇರಳದ ತಿರುವನಂತಪುರಂ ನಿವಾಸಿ ಕೇಶವ ಸಣ್ಣಪುಟ್ಟ  ಗಾಯಗೊಂಡಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!